Saturday, June 28, 2025
spot_imgspot_img
spot_imgspot_img

ಪ್ರಜ್ವಲ್ ರೇವಣ್ಣ ವಿಮಾನ ಟಿಕೆಟ್ ರದ್ದು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್​ಐಟಿ ತಂಡ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದೂ ಸಹ ಬೆಂಗಳೂರಿಗೆ ಬರುವುದು ಬಹುತೇಕ ಅನುಮಾನವಾಗಿದೆ. ಪ್ರಜ್ವಲ್ ರೇವಣ್ಣ ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ಬುಕ್ ಆಗಿದ್ದ 3.5 ಲಕ್ಷ ರೂ. ಮೊತ್ತದ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ರದ್ದುಗೊಳಿಸಲಾಗಿದೆ. ಈಗಾಗಲೇ 2 ಬಾರಿ ಪ್ರಜ್ವಲ್ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್ ಅನ್ನು ನಾಲ್ಕು ದಿನಗಳ ಹಿಂದೆಯೇ ರದ್ದು ಮಾಡಿಕೊಂಡಿರುವುದು ತಿಳಿದುಬಂದಿದೆ. ಆದರೆ, ಟಿಕೆಟ್ ರದ್ದು ಮಾಡಿದರೂ ಅದರ ಹಣ ವಾಪಸ್ ಪಡೆಯದೆ ಪ್ರಜ್ವಲ್ ಗೊಂದಲ ಮೂಡಿಸಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಮತ್ತೆ ಟಿಕೆಟ್ ಖರೀದಿಸಲು ಪ್ರಜ್ವಲ್ ಈ ತಂತ್ರ ಹೂಡಿರಬಹುದು ಎನ್ನಲಾಗಿದೆ.

ಈ ಮಧ್ಯೆ, ಪ್ರಜ್ವಲ್ ರೇವಣ್ಣ ಚಲನ ವಲನಗಳ ಮೇಲೆ ಎಸ್ಐಟಿ ತಂಡ ನಿಗಾ ಇಟ್ಟಿದೆ. ಬೇರೆ ವಿಮಾನದಲ್ಲಿ ಟಿಕೆಟ್ ಬುಕ್ ಆಗುತ್ತದೆಯೇ, ಆಗಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಸ್​ಐಟಿ ತಂಡ ಬೀಡುಬಿಟ್ಟಿದೆ.

- Advertisement -

Related news

error: Content is protected !!