Monday, June 8, 2026
spot_imgspot_img
spot_imgspot_img

ನೇಣು ಬಿಗಿದು ನವವಿವಾಹಿತ ಜೋಡಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ವಿಜಯಪುರ: ನಾಲ್ಕು ತಿಂಗಳ ಹಿಂದೆಯಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ದಂಪತಿ ನೇಣಿಗೆ ಶರಣಾದ ಘಟನೆ ವಿಜಯಪುರ ‌ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮನೋಜಕುಮಾರ ಪೋಳ (30) ಮತ್ತು ರಾಖಿ (23) ಎಂದು ಗುರುತಿಸಲಾಗಿದೆ.

​ನಾಲ್ಕು ತಿಂಗಳ ಹಿಂದೆಯಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ನಿನ್ನೆ ಮಂಗಳವಾರ ತಡರಾತ್ರಿ ಊಟ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜಕುಮಾರ ಹಾಗೂ ರಾಖಿ ದಂಪತಿ ತಾವಿಬ್ಬರೇ ಮನೆಯಲ್ಲಿದ್ದಾಗ ಈ ದುರ್ಘಟನೆ ನಡೆದಿದೆ. ಮನೋಜಕುಮಾರ ಅವರ ತಾಯಿ ಭಾರತಿ ಅವರು ತಮ್ಮ ಮಗಳ ಊರಿಗೆ ಹೋಗಿದ್ದರು. ಇಂದು‌ ಬುಧವಾರ ಬೆಳಿಗ್ಗೆ ವಾಪಸ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ನವ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಳಿಕ ಪತಿ-ಪತ್ನಿ ಆತ್ಮಹತ್ಯೆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ.

- Advertisement -

Related news

error: Content is protected !!