- Advertisement -
- Advertisement -





ಮೈಸೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ಯಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಭವಿಷ್ (8) ಎಂದು ಗುರುತಿಸಲಾಗಿದೆ.
ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದನು. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಭವಿಷ್ ಟ್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾನೆ ಬಳಿಕ ರೊಟಾವೆಲ್ಟರ್ಗೆ ಸಿಲುಕಿ ದೇಹ ಛಿದ್ರ ಛಿದ್ರವಾಗಿದೆ. ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
- Advertisement -