Saturday, June 28, 2025
spot_imgspot_img
spot_imgspot_img

ಕಾರ್ಕಳ: ಟಿಪ್ಪರ್-ಬೈಕ್ ನಡುವೆ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ ಗಾಯ..!

- Advertisement -
- Advertisement -

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಪಳ್ಳಿ ಗರಡಿ ಸಮೀಪ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ.

ಟಿಪ್ಪರ್ ನಲ್ಲಿ ಕ್ರಶರ್ ತುಂಬಿಕೊಂಡು ಬರಲಾಗುತ್ತಿದ್ದು, ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಇನ್ನು ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಘಟನೆಯ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

- Advertisement -

Related news

error: Content is protected !!