Monday, July 7, 2025
spot_imgspot_img
spot_imgspot_img

ಭಾರೀ ಮಳೆ ಹಿನ್ನೆಲೆ : ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಕೇರಳದಲ್ಲಿ ಭಾರತೀಯ ಹವಾಮಾನ ಇಲಾಖೆ ಇಂದು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೇರಳದ ರಾಜಧಾನಿ ತಿರುವನಂತಪುರಂ ಸೇರಿದಂತೆ 8 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ನಾಳೆ ಅತೀ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ ಸೇರಿದಂತೆ ೮ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೂ ಪಾಲಕ್ಕಾಡ್, ಕೋಯಿಕ್ಕೋಡ್, ಕಣ್ಣೂರು, ಮಲಪ್ಪುರಂ, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು ಭಾರೀ ಮಳೆಯನ್ನು ಸೂಚಿಸುತ್ತದೆ. ಆದರೆ, ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ.ನಿಂದ 20 ಸೆಂ.ಮೀ.ವರೆಗಿನ ಅತಿ ಭಾರೀ ಮಳೆ, ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ

ಮಳೆಯಿಂದಾಗಿ ಉಂಟಾಗುವ ಭಾರೀ ಅನಾಹುತಗಳಿಗೆ, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ)ವು ಜನರಿಗೆ ಜಾಗರೂಕರಾಗಿರಲು ಸಲಹೆ ನೀಡಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇದರಿಂದರಿಂದಾಗಿ ಭೂಕುಸಿತ ಮತ್ತು ಮಣ್ಣು ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ತಾಲೂಕು ಕಚೇರಿಗಳಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.

- Advertisement -

Related news

error: Content is protected !!