Tuesday, August 18, 2026
spot_imgspot_img
spot_imgspot_img

ಚಲಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ..!

- Advertisement -
- Advertisement -

ಕಾಸರಗೋಡ: ಅನಿಲ ಸಾಗಾಟದ ಟ್ಯಾಂಕರ್ ವೊಂದು ಚಲಿಸುತ್ತಿದ್ದಂತೆಯೇ ಅನಿಲ ಸೋರಿಕೆ ಉಂಟಾದ ಘಟನೆ ಹೊಸದುರ್ಗ ಸಮೀಪದ ಚಿತ್ತಾರಿ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಅನಿಲ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಟ್ಯಾಂಕರ್ ಅನ್ನು ನಿಲ್ಲಿಸಿದ ಚಾಲಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾನೆ. ಅದರಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಅನಿಲ ಸೋರಿಕೆ ತಡೆಗಟ್ಟಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಅನಿಲ ಸೋರಿಕೆ ಹಿನ್ನೆಲೆಯಲ್ಲಿ ಈ ಪ್ರದೇಶದ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸದ್ಯ ಸ್ಥಗಿತಗೊಳಿಸಲಾಗಿದೆ.

- Advertisement -

Related news

error: Content is protected !!