- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2024/04/VC_PUC_-1-819x1024.jpg)
![](https://vtvvitla.com/wp-content/uploads/2024/04/shri-energy-solar-667x1024.jpeg)
![](https://vtvvitla.com/wp-content/uploads/2024/04/vigneshwara-new-683x1024.jpeg)
![](https://vtvvitla.com/wp-content/uploads/2024/04/sanvi-creative-893x1024.jpg)
![](https://vtvvitla.com/wp-content/uploads/2022/01/indane-gas-2-1024x748.jpg)
ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ ( 43) ಎಂದು ಗುರುತಿಸಲಾಗಿದೆ.
ಸತೀಶ್ ಅವರು ಬಾಕ್ರಬೈಲಿನಲ್ಲಿ ಮರದ ಮಿಲ್ ನಲ್ಲಿ ಕೆಲಸಗಾರನಾಗಿದ್ದು, ಇಂದು ಬೆಳಿಗ್ಗೆ ಕೆಲಸಕ್ಕೆ ತೆರಳುವ ಉದ್ದೇಶದಿಂದ ರಸ್ತೆಯ ಬದಿಯಲ್ಲಿ ಟ್ರಾನ್ಸ್ ಪಾರ್ಮರ್ ಪಕ್ಕದಲ್ಲಿ ನಿಂತುಕೊಂಡಿರುವ ಸಮಯದಲ್ಲಿ ಆಕಸ್ಮಿಕವಾಗಿ ಸಿಡಿಲು ಬಡಿದು , ಒಮ್ಮೆಲೇ ವಿದ್ಯುತ್ ಪ್ರವೇಶಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -