- Advertisement -
- Advertisement -
ಶಿರ್ವ: ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಗ್ರಾಮ ಪಂ.ಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಎಂಬಲ್ಲಿ ನಡೆದಿದೆ.
ಮೃಥಪಟ್ಟ ಯುವಕ ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತಪಟ್ಟಿದ್ದಾರೆ.
- Advertisement -