Monday, June 30, 2025
spot_imgspot_img
spot_imgspot_img

ಮಂಗಳೂರು : ಆವರಣ ಗೋಡೆ ಕುಸಿತ : ಕಾರು, ಕೈಗಾಡಿ ಜಖಂ

- Advertisement -
- Advertisement -

ಮಂಗಳೂರು; ಆವರಣ ಗೋಡೆ ಕುಸಿದು ಎರಡು ಕಾರುಗಳು ಹಾಗೂ ಒಂದು ಕೈಗಾಡಿ ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಹತ್ತಿರದ ಮರದ ಮಿಲ್‌ನ ಬಳಿ ನಡೆದಿದೆ.

ಯೇನೆಪೋಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದ ಕೇರಳದ ಕುಟುಂಬವೊಂದು ಆವರಣ ಗೋಡೆ ಪಕ್ಕ ಕಾರು ನಿಲ್ಲಿಸಿದ್ದರು. ಈ ವೇಳೆ ಮಳೆಯಿಂದಾಗಿ ಒದ್ದೆಯಾಗಿ ಹೋಗಿದ್ದ ಕಾಂಪೌಂಡ್ ಗೋಡೆ ಕುಸಿದಿದೆ. ಪರಿಣಾಮ ಕಾಂಪೌಂಡ್ ಗೋಡೆಯ ಕೆಂಪುಕಲ್ಲುಗಳಡಿ ಸಿಲುಕಿ ಕಾರುಗಳ ಗಾಜುಗಳು ನಜ್ಜುಗುಜ್ಜಾಗಿವೆ.
ಸ್ಥಳದಲ್ಲಿದ್ದ ಬೇಲ್‌ ಪುರಿ ಮಾರಾಟದ ಕೈ ಗಾಡಿ ಕಲ್ಲಿನಡಿಗೆ ಸಿಕ್ಕಿ ಸಂಪೂರ್ಣ ಹಾನಿಗೊಂಡಿದೆ. ಬೇಲ್‌ ಪುರಿ ಮಾರಾಟಗಾರ ಎರಡು ದಿನಗಳ ಹಿಂದೆ ಸ್ಥಳಕ್ಕೆ ₹ 15 ಸಾವಿರ ಪಾವತಿ ಮಾಡಿ ಆವರಣ ಗೋಡೆ ಪಕ್ಕದಲ್ಲಿ ಕೈಗಾಡಿಯನ್ನು ನಿಲ್ಲಿಸಿದ್ದ. ಆ ಕೈಗಾಡಿ ಕಲ್ಲುಗಳ ಅಡಿ ಸಿಲುಕಿ ಅಪ್ಪಚ್ಚಿಯಾಗಿದೆ.

- Advertisement -

Related news

error: Content is protected !!