Monday, June 30, 2025
spot_imgspot_img
spot_imgspot_img

ಕುಂದಾಪುರ: ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವು

- Advertisement -
- Advertisement -

ಕುಂದಾಪುರ: ಬಲೆ ಬೀಸಿ ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಕುದ್ರುವಿನ ಬಳಿಯ ಸೌಪರ್ಣಿಕ ನದಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಬಡಾಕೆರೆ ಗ್ರಾಮದ ತೊಪು ನಿವಾಸಿ ಮಂಜು ಮೊಗವೀರ (57) ಎಂದು ಗುರುತಿಸಲಾಗಿದೆ.

ಮಂಜು ಮೊಗವೀರ ಸಮುದ್ರ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ತೂಫಾನ್ ಇದ್ದ ಕಾರಣ ಮೀನುಗಾರಿಕೆಗೆ ತೆರಳಿರಲಿಲ್ಲ. ಅದೇ ಕಾರಣಕ್ಕೆ ಸೌಪರ್ಣಿಕಾ ನದಿಗೆ ಗಾಳ ಹಾಕಿ ಮೀನು ಹಿಡಿದು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸೋಮವಾರ ಸಂಜೆ ಎಂದಿನಂತೆ ಬಡಕೆರೆ ಕುದ್ರುವಿನ ಬಳಿಯ ಸೌಪರ್ಣಿಕ ನದಿಯಲ್ಲಿ ಗಾಳ ಹಾಕಲು ತೆರಳಿದ್ದ ಮಂಜು ಮೊಗವೀರ ಕಾಲು ಜಾರಿ ನೀರಿಗೆ ಬಿದ್ದಿರಬಹುದು ಎಂದುಶಂಕಿಸಲಾಗಿದೆ. ನಾಪತ್ತೆಯಾಗಿದ್ದ ಮಂಜು ಮೊಗವೀರರನ್ನು ಹುಡುಕಾಡಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!