Sunday, June 29, 2025
spot_imgspot_img
spot_imgspot_img

ಪ್ರಜ್ವಲ್ ರೇವಣ್ಣ ಭಾರತಕ್ಕೆ ಫ್ಲೈಟ್ ಟಿಕೆಟ್ ಬುಕ್, ಯಾವಾಗ ಬರ್ತಾರೆ ಗೊತ್ತಾ?

- Advertisement -
- Advertisement -

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್​ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 31ರ ಬೆಳಗ್ಗೆ 10:30ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಂತೆ ಮೇ 31ರಂದು ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಆದರೆ, , ಪ್ರಜ್ವಲ್​ ರೇವಣ್ಣ ಆಗಮಿಸುವ ವಿಮಾನ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಮೇ 31ರ ಮಧ್ಯರಾತ್ರಿ 12:30ಕ್ಕೆ ಬಂದಿಳಿಯಲಿದೆ.

ಇನ್ನು ಪ್ರಜ್ವಲ್​ ರೇವಣ್ಣ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಬಂಧಿಸುವ ಎಲ್ಲಾ ಸಾಧ್ಯತೆಗಳಿವೆ, ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅಲರ್ಟ್​ ಆಗಿದ್ದು, ಪ್ರಜ್ವಲ್ ರೇವಣ್ಣ ಯಾವ ವಿಮಾನದಲ್ಲಿ ಎಷ್ಟು ಗಂಟೆ ಬೆಂಗಳೂರಿಗೆ ಬರಲಿದೆ ಎಂದು ಇಂಚಿಚು ಮಾಹಿತಿಯನ್ನು ಕಲೆಹಾಕುತ್ತಿದೆ.

ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್​ಔಟ್ ನೋಟಿಸ್ ಜಾರಿ ಮತ್ತು ಅರೆಸ್ಟ್​ ವಾರಂಟ್​ ಸಹ ಜಾರಿಯಾಗಿದೆ. ಹೀಗಾಗಿ ಯಾವ ವಿಮಾನದಲ್ಲಿ ಪ್ರಜ್ವಲ್‌ ಬರುತ್ತಾರೆ ಎಂದು ಎಸ್​ಐಟಿ ಮಾಹಿತಿ ಪಡೆದುಕೊಂಡು ವಶಕ್ಕೆ ಪಡೆಯಲಿದೆ. ಅದಕ್ಕೂ ಮೊದಲು ಇಮಿಗ್ರೇಷನ್ ಅಧಿಕಾರಿಗಳು ಪ್ರಜ್ವಲ್​ ವಶಕ್ಕೆ ಪಡೆಯಲಿದ್ದು, ಬಳಿಕ ಎಸ್ಐಟಿಗೆ ಒಪ್ಪಿಸಲಿದ್ದಾರೆ. ಅದಾದ ಬಳಿಕ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು ಮೊದಲಿಗೆ ಅವರಿಗೆ ಮೆಡಿಕಲ್ ಚೆಕಪ್ ಮಾಡಿಸಲಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು, ತಮ್ಮ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಲಿದ್ದಾರೆ ಎಂಬ ಮಾಹಿತಿ ದೊರಕಿದೆ.

- Advertisement -

Related news

error: Content is protected !!