- Advertisement -
- Advertisement -



ಬೆಳ್ತಂಗಡಿ: ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ನಡೆದಿದೆ.
ಬೈಕ್ ಸವಾರ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದು ಟಿಪ್ಪರ್ ಸವಾರ ಟಿಪ್ಪರ್ ರಿವರ್ಸ್ ತೆಗೆಯುವ ಸಂದರ್ಭ ಈ ಘಟನೆ ನಡೆದಿದೆ.
ಬೈಕ್ ಟಿಪ್ಪರ್‌ನ ಚಕ್ರದ ಅಡಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆವೇಳೆಗೆ ಆತ ಮೃತಪಟ್ಟಿದ್ದ. ಮೃತ ಬೈಕ್ ಸವಾರನ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿದುಬರಬೇಕಾಗಿದೆ.
ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -