- Advertisement -
- Advertisement -



ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. 7 ಹಂತಗಳಲ್ಲಿ ನಡೆದ ಚುನಾವಣಾ ಹಬ್ಬದ ಫಲಿತಾಂಶಕ್ಕಾಗಿ ಇಡೀ ಜಗತ್ತೇ ತುದಿಗಾಲಲ್ಲಿ ನಿಂತಿದೆ.
ಮತ ಎಣಿಕೆಗೆ ಅಂತಿಮ ಹಂತದ ಸಿದ್ದತೆಗಳು ಎಲ್ಲಾ ಕಡೆ ಮುಗಿದಿವೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದೆ. ಮೊದಲಿಗೆ ಅಂಚೆ ಮತಗಳು ಮತ್ತು ಹಿರಿಯ ಮತದಾರರ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಅರ್ಧ ಗಂಟೆ ನಂತರ ಇವಿಎಂ ಮತಗಳ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನದ ಹೊತ್ತಿಗೆ ನಿಖರವಾಗಿ ಗೊತ್ತಾಗುವ ನಿರೀಕ್ಷೆ ಇದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಈಗಾಗಲೇ ಎಕ್ಸಿಟ್ ಪೋಲ್‍ಗಳಲ್ಲಿ ಎನ್‍ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಅಂತ ಹೇಳುತ್ತಿದ್ದರೂ, ಐಎನ್‍ಡಿಐಎ ಮೈತ್ರಿಕೂಟದ ಉತ್ಸಾಹವೇನೂ ಕುಗ್ಗಿಲ್ಲ. ಪ್ರಧಾನಿ ನರೇಂದ್ರ ಮೋದಿ, ಹ್ಯಾಟ್ರಿಕ್ ರಾಜ್ಯಭಾರದ ನಿರೀಕ್ಷೆಯಲ್ಲಿದ್ದಾರೆ.
- Advertisement -