Sunday, June 29, 2025
spot_imgspot_img
spot_imgspot_img

ಉತ್ತರಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ – 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಉತ್ತರಪ್ರದೇಶ: ದೇಶದಲ್ಲಿ ಅತ್ಯಾಚಾರದ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಅದರಲ್ಲೂ ಉತ್ತರಪ್ರದೇಶ ಅತ್ಯಾಚಾರಿಗಳ ತವರೂರಂತೆ ಆಗಿದೆ. 15 ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಉತ್ತರಪ್ರದೇಶದ ರಾಂಪುರ ಜಿಲ್ಲೆಯ ಕೆಮ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಭೀಕರ ಘಟನೆ ನಡೆದಿದ್ದು, ಬಾಲಕಿಯ ಮನೆಯಲ್ಲಿಯೇ ಮನೆ ನಿರ್ಮಾಣದ ಕೆಲಸ ಮಾಡುತ್ತಿದ್ದ ಇಬ್ಬರು ಕಟ್ಟಡ ಕಾರ್ಮಿಕರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ವರದಿಯಾಗಿದೆ.

ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ತಾಯಿ ತಂದೆ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಈ ಭಟ್‌ಪುರ ತರಣ್ ನಿವಾಸಿಗಳಾದ ರಿಝ್ವಾನ್ ಮತ್ತು ಆಲಂ ಬಾಲಕಿಯನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ.

- Advertisement -

Related news

error: Content is protected !!