Saturday, June 28, 2025
spot_imgspot_img
spot_imgspot_img

ದ.ಕ ಮತ್ತು ಉಡುಪಿ ಜಿಲ್ಲೆಗಳ ಅತೀ ಹೆಚ್ಚು ಮತ ಚಲಾವಣೆಯ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ

- Advertisement -
- Advertisement -

ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ. ಈ ಮೂಲಕ ಉಭಯ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಮತ ಚಲಾವಣೆಯ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನೋಟಾಗೆ 23,576 ಮತಗಳು ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ನೋಟಾಗೆ 11,269 ಮತಗಳು ಚಲಾವಣೆಯಾಗಿದೆ. ದಕ್ಷಿಣ ಕನ್ನಡ ಕ್ಷೇತ್ರದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಬೆಳ್ತಂಗಡಿಯಲ್ಲಿ 7,691 ಮತ, ಮೂಡುಬಿದಿರೆ 2,166, ಮಂಗಳೂರು ನಗರ ಉತ್ತರ 2,019, ಮಂಗಳೂರು ನಗರ ದಕ್ಷಿಣ 1,551, ಮಂಗಳೂರು 892, ಬಂಟ್ವಾಳ 2,353, ಪುತ್ತೂರು 2302, ಸುಳ್ಯ 4,541 ಮತಗಳು ನೋಟಾಕ್ಕೆ ಬಿದ್ದಿದೆ. ಅಂಚೆ ಮತದಾನದಲ್ಲೂ 61 ಮತಗಳು ನೋಟಾಕ್ಕೆ ಬಿದ್ದಿರುತ್ತದೆ.

ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ 1,578, ಉಡುಪಿ 1,778, ಕಾಪು 1,523, ಕಾರ್ಕಳ 2,780, ಶೃಂಗೇರಿ 943, ಮೂಡಿಗೆರೆ 1,135, ಚಿಕ್ಕಮಗಳೂರು 814, ತರಿಕೆರೆ 684 ನೋಟ ಮತ ಚಲಾವಣೆಯಾಗಿರುತ್ತದೆ.

ಹಲವು ಕಾರಣಗಳಿಂದ ನೋಟಾದತ್ತ ಮುಖಮಾಡಿದ ಮತದಾರರು ತಮ್ಮ ಮತಗಳನ್ನು ಯಾವುದೇ ಪಕ್ಷಗಳಿಗೆ ನೀಡದೆ ನೋಟಾದತ್ತ ಒಲವು ತೋರಿಸಿರುವುದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕುತೂಹಲ ಮೂಡಿಸಿದೆ.

- Advertisement -

Related news

error: Content is protected !!