


ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ(33) ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ.
ಬೆಳ್ತಂಗಡಿ : ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಜೂ.4 ರಂದು ರಾತ್ರಿ ಮಾರಾಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ(48) ಎಂಬವರು ರಾಜೇಶ್ ಎಮ್.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಾಲಪ್ಪ ಗೌಡ ಅವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.