- Advertisement -
- Advertisement -


ಕಾರ್ಕಳ: ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ವ್ಯಕ್ತಿ ಕಾರ್ಕಳದ ನಲ್ಲೂರು ಗ್ರಾಮದ ಸುರೇಶ್ ಎಂದು ಗುರುತಿಸಲಾಗಿದೆ.
ಇವರು ಮೇ.25 ರಂದು ಎಲ್ಲಿಗಾದರೂ ಕೂಲಿ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಮನೆಯಿಂದ ಹೋದವರು ಇದುವರೆಗೆ ವಾಪಸ್ಸು ಮನೆಗೆ ಬಾರದೆ ಸಂಬಂದಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ. ಈ ಬಗ್ಗೆ ನಾಪತ್ತೆಯಾಗಿರುವವರ ಮಗ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -