Sunday, June 29, 2025
spot_imgspot_img
spot_imgspot_img

ಬಂಟ್ವಾಳ : ಅಕ್ರಮ ಮರಳು ಸಾಗಾಟ : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ : ಪುದು ಗ್ರಾಮದ ಫರಂಗಿಪೇಟೆಯಲ್ಲಿ ಬುಧವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿ ಲಾರಿ ಚಾಲಕ ಹಾಗೂ ಮಾಲಕಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫರಂಗಿಪೇಟೆಯಲ್ಲಿ ಬುಧವಾರ ರಾತ್ರಿ ಮಂಗಳೂರು ಕಡೆಯಿಂದ ಬರುತ್ತಿದ್ದ, ಕೆಎ 19 ಎಎ9244 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಎಸ್ಸೆ ಹರೀಶ್ ಎಂ ಆರ್ ನೇತೃತ್ವದ ಪೊಲೀಸರು ತಡೆದು ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಕೃತ್ಯ ಬೆಳಕಿಗೆ ಬಂದಿದೆ.

ಈ ಬಗ್ಗೆ ಲಾರಿ ಚಾಲಕ ಶಾನವಾಝ್ ಎಂಬಾತನಲ್ಲಿ ವಿಚಾರಿಸಿದಾಗ, ಟಿಪ್ಪರ್ ಮಾಲಕಿ ಶಾಹಿದಾ ಬಾನು ಎಂದು ತಿಳಿದುಬಂದಿದ್ದು, ಆರೋಪಿ ಚಾಲಕ ವಳಚ್ಚಿಲ್ ಎಂಬಲ್ಲಿನ ಹೊಳೆಬದಿಯ ಧಕ್ಕೆಯಿಂದ ಮರಳನ್ನು ಅಕ್ರಮವಾಗಿ ಲೋಡು ಮಾಡಿ ಸಾಗಿಸುತ್ತಿರುವುದಾಗಿ ತಿಳಿಸಿರುತ್ತಾನೆ. ಲಾರಿ ಸಹಿತ ಮರಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ, ಅ.ಕ್ರ 67/2024, ಕಲಂ: 379 ಐ ಪಿ ಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!