Sunday, June 29, 2025
spot_imgspot_img
spot_imgspot_img

ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!

- Advertisement -
- Advertisement -

ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕೋಳಿಯನ್ನು ತುಂಬಿಕೊಂಡು ಹೊರಟಿದ್ದ ಪಿಕಪ್ ವಾಹನವು ಇಂದು ಮುಂಜಾನೆ ಸುಮಾರು 5:30’ರ ಸಮಯಕ್ಕೆ ರಾಷ್ಟ್ರೀಯ ಹೆದ್ದಾರಿ 66’ರ ಹೊನ್ನಕಟ್ಟೆ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಡ್ಡಲಾಗಿ ಬಿದ್ದು ಕೋಳಿ ತುಂಬಿದ ಟ್ರೈಗಳು ರಸ್ತೆಯಲ್ಲೆ ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು, ಈ ಸಂದರ್ಭ ಕೆಲವು ಕಾಲ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು, ಬಳಿಕ ಮಂಗಳೂರು ಉತ್ತರ ಸಂಚಾರಿ ಠಾಣೆಯ ಪೋಲೀಸರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸುವ ಮೂಲಕ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!