Sunday, June 29, 2025
spot_imgspot_img
spot_imgspot_img

ಮಂಗಳೂರು ಸಿಸಿಬಿ ಕಾರ್ಯಾಚರಣೆ : ಮೂವರು ಕುಖ್ಯಾತ ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಉಳ್ಳಾಲದ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಉಳ್ಳಾಲದ ಕಿಲಿರಿಯ ನಗರ, ಸೀ ಸೈಡ್, ಮುಕ್ಕಚರಿ ಮುಹಮ್ಮದ್ ಸಮೀರ್ ಅಲಿ (33) ಉಳ್ಳಾಲ ತಾಲೂಕು ಬೋಲಿಯಾರ್ ಕಾಫಿಕಾಡ್ ಹೌಸ್, ಜುಮ್ಮಾ ಮಸೀದಿಯ ಮೊಹಮ್ಮದ್ ಮನ್ಸೂರ್ (30), ಕೊಣಾಜೆಯ ಮಲಾರ ಬದ್ರಿಯಾ ನಗರದ ಚಾವಡಿ ಗ್ರಾಮದ ಮೊಹಮ್ಮದ್ ನೌಷಾದ್(30) ಎಂಬ ಕುಖ್ಯಾತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳಿಂದ ಮಾರಾಕಾಯುಧಗಳಾದ ತಲವಾರು-1, ಚೂರಿ-1, ಮೊಬೈಲ್ ಫೋನುಗಳು-3 ಹಾಗೂ KL -60-R-9755 ಜೀಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಒಟ್ಟು ಮೌಲ್ಯ 25,90,000 ರೂ. ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆಯಾಗಿದೆ.

ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡ ಮುಕ್ಕಚ್ಚೇರಿ ಪರಿಸರದಲ್ಲಿಗೆ ಹೊಂಚು ಹಾಕುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ಸುದೀಪ್ ಎಂ ವಿ, ಶರಣಪ್ಪ ಎಸ್ ಭಂಡಾರಿ ಮತ್ತು ಸಿಬ್ಬಂದಿಯವರು ಭಾಗಿಯಾಗಿದ್ದಾರೆ.

- Advertisement -

Related news

error: Content is protected !!