Friday, June 5, 2026
spot_imgspot_img
spot_imgspot_img

ಅಂಚೆಯಲ್ಲಿ ಭಾಗ್ಯಲಕ್ಷ್ಮೀ !!!

- Advertisement -
- Advertisement -

ಬೆಂಗಳೂರು (ಅ.23): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಯೋಜನೆಯಾದ ಭಾಗ್ಯಲಕ್ಷ್ಮಿ ಯೋಜನೆಯನ್ನು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಬದಲು ಸುಕನ್ಯಾ ಸಮೃದ್ಧಿ ಯೋಜನೆಯಡಿ ಅಂಚೆ ಇಲಾಖೆ ಮೂಲಕ ಮುಂದುವರಿಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.

ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇನ್ನು ಎಲ್‌ಐಸಿ ಬದಲು ಅಂಚೆ ಇಲಾಖೆ ಯೋಜನೆಯ ಏಜೆನ್ಸಿಯಾಗಲಿದೆ.ಭಾಗ್ಯಲಕ್ಷ್ಮೀ ಯೋಜನೆಯಡಿ ಹೆಣ್ಣು ಮಗುವಿಗೆ 18 ವರ್ಷ ತುಂಬಿದಾಗ 1 ಲಕ್ಷ ರೂ. ಲಭ್ಯವಾಗುತ್ತಿತ್ತು. ಆದರೆ ಯೋಜನೆಯನ್ನು ಮರು ವಿನ್ಯಾಸಗೊಳಿಸಿರುವ ಕಾರಣ 21 ವರ್ಷಕ್ಕೆ ಬಾಂಡ್‌ ಮೆಚ್ಯೂರಿಟಿಯಾಗಲಿದೆ. 18 ವರ್ಷದ ಬಳಿಕ ಯೋಜನೆಯ ಅರ್ಧ ಮೊತ್ತವನ್ನು ಪಡೆಯಲು ಫಲಾನುಭವಿ ಅರ್ಹರಾಗಿರುತ್ತಾರೆ.

- Advertisement -

Related news

error: Content is protected !!