Sunday, June 29, 2025
spot_imgspot_img
spot_imgspot_img

ಬಂಟ್ವಾಳ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ: ಆರೋಪಿ ಅರೆಸ್ಟ್‌

- Advertisement -
- Advertisement -

ಬಂಟ್ವಾಳ: ಹಾಸನ ಮೂಲದ ವ್ಯಕ್ತಿಯೊಬ್ಬ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಹಾಸನ ತಾಲೂಕಿನ‌ ಬೇಲೂರು ಸಮೀಪದ ಮಹಿಳೆಯನ್ನು ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ವಿವಾಹಮಾಡಿ ಕೊಡಲಾಗಿದ್ದು, ಮಹಿಳೆ ತಮ್ಮ ಗಂಡನಮನೆಯಲ್ಲೇ ವಾಸವಾಗಿದ್ದರು. ಹಾಸನದಲ್ಲಿ ರಿಕ್ಷಾ ಚಾಲಕನಾಗಿದ್ದ ಪ್ರಮೋದ್ ಎಂಬಾತನ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಹೋಗಿರುವಾಗ ಸಂತ್ರಸ್ತ ಮಹಿಳೆಗೆ ಈತ ಪರಿಚಯಸ್ಥನಾಗಿದ್ದು, ಮೊಬೈಲ್ ‌ನಂಬರನ್ನು ಆತ ಪಡೆದುಕೊಂಡಿದ್ದ ಎನ್ನಲಾಗಿದೆ.

ಕಳೆದ ಕೆಲ ಸಮಯದ ಹಿಂದೆ ಮಹಿಳೆಯ ಗಂಡನ ಮನೆಗೆ ಕಲ್ಲಡ್ಕಕ್ಕೆ ಬಂದಿದ್ದ ಈತ ಮಹಿಳೆಗೆ ಕೀಟಲೆ ನೀಡಿದ್ದಲ್ಲದೇ, ಮನೆಯೊಳಗಿದ್ದ ಅನೇಕ ಬೆಲೆ ಬಾಳುವ ವಸ್ತುಗಳನ್ನು ಹಾಳು ಮಾಡಿ ಹೋಗಿದ್ದ. ಈ ಸಂದರ್ಭದಲ್ಲಿ ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು ಎಂದು ಹೇಳಲಾಗಿದೆ.

ಇದೀಗ ಮತ್ತೆ ಹಾಸನದಿಂದ ಬಂಟ್ವಾಳಕ್ಕೆ ಬಂದಿಳಿದ ಆರೋಪಿ ‌ಪ್ರಮೋದ್ ಮತ್ತೆ ಗಂಡನಿಲ್ಲದ ಸಮಯ ನೋಡಿಕೊಂಡು ಮಹಿಳೆಯ ಮನೆಗೆ ನುಗ್ಗಿದ್ದಾನೆ. ಮಹಿಳೆಯನ್ನು ತಬ್ಬಿ ‌ಹಿಡಿದು ಲೈಂಗಿಕವಾಗಿ ಉಪಯೋಗಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಮಹಿಳೆ ಜೋರಾಗಿ ಬೊಬ್ಬೆ ಹೊಡೆದಾಗ ಮನೆಯ ‌ಸಮೀಪದ ದೇವಾಲಯದೊಳಗೆ ಇದ್ದ ಗಂಡ ಬಂದು ರಕ್ಷಣೆ ಮಾಡಿದ್ದಾನೆ ಎಂದು ‌ಹೇಳಲಾಗಿದೆ.

- Advertisement -

Related news

error: Content is protected !!