Sunday, June 29, 2025
spot_imgspot_img
spot_imgspot_img

ಅತ್ತೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ..!

- Advertisement -
- Advertisement -

ಚಿಕ್ಕೋಡಿ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ರೂಪಾಬಾಯಿ ಬಾಳು ರೂಪನವರ (31) ಎಂದು ಗುರುತಿಸಲಾಗಿದೆ.

ಮೃತಳ‌ ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅತ್ತೆ ಸೇವಂತಾ ಸಿದರಾಯ ರೂಪನವರ ಅವರಿಂದ ರೂಪಾಬಾಯಿ ದಿನಂಪ್ರತಿ ಕಿರಿಕಿರಿ ಅನುಭವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದ ಮನನೊಂದು ಅವರು ಆತ್ಮಹತ್ಯೆ ದಾರಿ ಹಿಡಿದಿರುವುದಾಗಿ ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ರೂಪಾಬಾಯಿ ಪತಿ ಹಾಗೂ ತನ್ನ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!