Friday, June 27, 2025
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ; ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರು..!

- Advertisement -
- Advertisement -

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು.

ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ಬಂಧನ 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜೂ. 13 ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದ್ದಾರೆ. ಶಶಿರಾಜ್ ಶೆಟ್ಟಿ ಪರ ನ್ಯಾಯವಾದಿ ಮಹೇಶ್ ಕಜಿ ಕೋರ್ಟ್ ನಲ್ಲಿ ವಾದಿಸಿದರು.

- Advertisement -

Related news

error: Content is protected !!