
ಪುತ್ತೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವತಿಯಿಂದ ಪುತ್ತೂರಿನ ತಾಲೂಕು ಖಾಸಗಿ ಬಸ್ ನಿಲ್ದಾಣದಿಂದ ಮಿನಿ ವಿಧಾನ ಸೌಧದ ವರೆಗೆ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 3 ರೂ, ಡೀಸೆಲ್ ಬೆಲೆ 3.5 ರೂ. ಹೆಚ್ಚಳ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಕಾಂಗ್ರೇಸ್ ಪಾಲಿಗೆ ಕರ್ನಾಟಕ ಕಲೆಕ್ಷನ್ ಕೇಂದ್ರವಾಗಿದೆ. ರಾಜ್ಯದಲ್ಲಿ ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ, ವಿದ್ಯುತ್ ಕಡಿತದಿಂದ ರಾಜ್ಯ ಕತ್ತಲೆಯಲ್ಲಿ ಮುಳುಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು. ಜೊತೆಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ರಾಜಿನಾಮೆ ನೀಡುವಂತೆ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಕೃಷ್ಣ ಆಳ್ವ ಬಿಜೆಪಿ ಮುಖಂಡರಾದ ಆರ್.ಸಿ ನಾರಾಯಣ, ಜಗನ್ನಿವಾಸ ರಾವ್, ಪುನೀತ್ ಮಾಡತಾರ್ ಸೇರಿದಂತೆ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.