- Advertisement -
- Advertisement -


ಕಾಸರಗೋಡು: ಬೈಕ್ ಹಾಗೂ ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಆರಿಕ್ಕಾಡಿಯಲ್ಲಿ ನಡೆದಿದೆ .
ಕೊಡ್ಯಮ್ಮೆ ಚೆಪ್ಪಿನಡ್ಕದ ಅಸ್ಗರ್ (24) ಮೃತ ಪಟ್ಟವರು. ಸಹ ಸವಾರ ಅನಾಸ್ ಗಂಭೀರ ಗಾಯಗೊಂಡಿದ್ದು , ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ .
ಶುಕ್ರವಾರ ರಾತ್ರಿ ಕುಂಬಳೆ ಸೇತುವೆ ಬಳಿ ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಅಸ್ಗರ್ ನನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
- Advertisement -