Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಜಾನುವಾರಿನ ಹಗ್ಗ ರಿಕ್ಷಾದ ಚಕ್ರಕ್ಕೆ ಸಿಲುಕಿ ರಿಕ್ಷಾ ಪಲ್ಟಿ; ಚಾಲಕ ಗಂಭೀರ

- Advertisement -
- Advertisement -

ಬೆಳ್ತಂಗಡಿ: ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿಯಾದ ಘಟನೆ ಬೆಳ್ತಂಗಡಿ ಕನ್ಯಾಡಿಯ ಗುರಿಪಳ್ಳದ ಕೊಡೋಳು ಸಮೀಪ ಇಂದು ನಡೆದಿದೆ

ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿದೆ. ಪರಿಣಾಮ ರಿಕ್ಷಾ ಪಲ್ಟಿಯಾಗಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕನನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ಸಾಗಿಸ ರವಾನಿಸಲಾಗಿದ್ದು, ರಿಕ್ಷಾದಲ್ಲಿ ಮಡಂತ್ಯಾರು ಕಡೆಯ ಮೂವರು ಪ್ರಯಾಣಿಸುತ್ತಿದ್ದರು. ಆ ಮೂವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!