Saturday, June 28, 2025
spot_imgspot_img
spot_imgspot_img

ಕುಂದಾಪುರದಲ್ಲಿ ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಕಾರವಾರದಲ್ಲಿ ಪತ್ತೆ..!

- Advertisement -
- Advertisement -

ಕುಂದಾಪುರ: ವಾರದ ಹಿಂದೆ ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಟಿ.ಆರ್.ಯೋಗೀಶ್(23) ಎಂಬ ಯುವಕನ ಮೃತದೇಹವು ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಜೂ.20ರಂದು ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ನೇಹಿತನ ಆಮಂತ್ರಣದಂತೆ ಯೋಗೀಶ್ ಹಾಗೂ ಸಂದೀಪ್ ಎಂಬವರು ತಿಪಟೂರಿನಿಂದ ಬೈಕಿನಲ್ಲಿ ಬೀಜಾಡಿಗೆ ಜೂ.19ರಂದು ಆಗಮಿಸಿದ್ದರು. ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದ ಇವರು ನೀರಿಗಿಳಿದು ಆಡುತ್ತಿದ್ದರು.

ಬುಧವಾರ ಸಂಜೆ ವೇಳೆಗೆ ಮಳೆ ಜಾಸ್ತಿ ಇದ್ದುದಲ್ಲದೆ, ಕಡಲ ಅಲೆಗಳ ಅಬ್ಬರ, ಗಾಳಿಯ ವೇಗವೂ ತುಸು ಜೋರಾಗಿಯೇ ಇತ್ತು. ಅಲೆಯಬ್ಬರಕ್ಕೆ ಯೋಗೀಶ್ ಕೊಚ್ಚಿಕೊಂಡು ಹೋಗುತ್ತಿದ್ದುದನ್ನು ಕಂಡ ಜತೆಗಿದ್ದ ಸಂದೀಪ್ ಅವರು ಯೋಗೀಶ್ ನನ್ನು ರಕ್ಷಿಸಲು ಪ್ರಯತ್ನಿಸಿದ್ದು, ಈ ವೇಳೆ ಆತ ಸಹ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋಗುವ ಅಪಾಯವನ್ನು ಅರಿತ ಅಲ್ಲಿದ್ದ ಸ್ಥಳೀಯರು ಸಂದೀಪ್‌ನನ್ನು ರಕ್ಷಿಸಿದ್ದಾರೆ. ಆದರೆ ಯೋಗೀಶ್ ಮಾತ್ರ ಸಮುದ್ರದ ನೀರಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ನಂದಕುಮಾ‌ರ್, ನಗರ ಠಾಣಾ ಎಸ್‌ಐ ಪ್ರಸಾದ್ ಕುಮಾರ್ ಹಾಗೂ ಪೊಲೀಸ್ ಸಿಬಂದಿ ಹಾಗೂ ಕರಾವಳಿ ಕಾವಲು ಪಡೆಯ ಸಿಬಂದಿ ಭೇಟಿ ನೀಡಿ, ಯುವಕನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದರು.

ಆದರೆ ರಾತ್ರಿಯಾಗಿದ್ದರಿಂದ ಸ್ಥಗಿತಗೊಳಿಸಲಾಯಿತು. ಇದಾದ ಬಳಿಕ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಯೋಗೀಶ್ ಮೃತದೇಹ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಘಟನೆ ನಡೆದು ಏಳನೇ ದಿನಕ್ಕೆ ಯೋಗೀಶ್ ಮೃತ ದೇಹ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

- Advertisement -

Related news

error: Content is protected !!