Saturday, June 28, 2025
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಕೊಲೆ ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‍ನನ್ನು ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳನ್ನು ತುಮಕೂರು ಜೈಲಿಗೆಸ್ಥಳಾಂತರಿಸುವಂತೆ ಆದೇಶ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಆರೋಪಿಗಳನ್ನು ಸ್ಥಳಾಂತರಿಸಿದ್ದಾರೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಭದ್ರತಾ ದೃಷ್ಟಿಯಿಂದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಮನವಿಯನ್ನು ಪರಿಗಣಿಸಿದ್ದ ನ್ಯಾಯಾಲಯ ಈ ನಾಲ್ವರು ಆರೋಪಿಗಳನ್ನ ಪ್ರತ್ಯೇಕವಾಗಿಡಲು ಆದೇಶಿಸಿತ್ತು.

- Advertisement -

Related news

error: Content is protected !!