


2022 ರ ಟಿ20 ವಿಶ್ವಕಪ್ ಸೆಮಿಸ್ ಸೋಲಿನ ಸೇಡು ತೀರಿಸಿಕೊಂಡಿದೆ ಟೀಂ ಇಂಡಿಯಾ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಟೀಂ ಇಂಡಿಯಾ ಬೌಲರ್ಸ್‌ಗಳ ಅದ್ಭುತ ಬೌಲಿಂಗ್‌ನಿಂದ ಗೆದ್ದು ಬೀಗಿದೆ. 2022 ರ ಸೆಮಿಸ್ ಸೋಲಿನ ಸೇಡು ತೀರಿಸಿಕೊಂಡಿದೆ ಭಾರತ. ಶನಿವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯಲಿದೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 171 ರನ್‌ಗಳಿಸಿತ್ತು. 172 ರನ್‌ಗಳ ಗುರಿ ಬೆನ್ನತ್ತಿ ಬ್ಯಾಟಿಂಗ್‌ಗೆ ಬಂದ ಇಂಗ್ಲೆಂಡ್ ಬ್ಯಾಟರ್ಸ್‌ಗೆ ಟೀಂ ಇಂಡಿಯಾ ಬೌಲರ್ಸ್ ಚಳ್ಳೆ ಹಣ್ಣು ತಿನ್ನಿಸಿದ್ರು. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಿದೆ. ಇಂಗ್ಲೆಂಡ್ 20 ಓವರ್‌ಗಳಲ್ಲಿ 10 ವಿಕೆಟ್ ಕಳೆದುಕೊಂಡು 103 ರನ್‌ಗಳಿಸಿ ಟೀಂ ಇಂಡಿಯಾ ಎದುರು ಮಂಡಿಯೂರಿತು.
ಟೀಂ ಇಂಡಿಯಾಗೆ ಎಂದಿನಂತೆ ನಿರೀಕ್ಷಿತ ಆರಂಭ ಸಿಗಲಿಲ್ಲ. ಟೀಂ ಇಂಡಿಯಾ 19 ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ 9 ರನ್ ಗಳಿಸಿ ಔಟಾದರು. ಆ ಬಳಿಕ ರಿಷಬ್ ಪಂತ್ ಕೂಡ 4 ರನ್ ಗಳಿಸಿ ಪೆವಿಲಿಯನ್ಗೆ ಮರಳಿದರು. ಹೀಗಾಗಿ ಟೀಂ ಇಂಡಿಯಾ ಮೊದಲ 6 ಓವರ್‌ಗಳಲ್ಲಿ 40 ರನ್ ಕಲೆಹಾಕುವಷ್ಟರಲ್ಲಿ ಪ್ರಮುಖ 2 ವಿಕೆಟ್ ಕಳೆದುಕೊಂಡಿತು. ಆದರೆ ಆ ನಂತರ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಇಬ್ಬರೂ ಟೀಮ್ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಈ ಇಬ್ಬರೂ 73 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.
ಇದೇ ವೇಳೆ ರೋಹಿತ್ 32ನೇ ಅರ್ಧಶತಕ ದಾಖಲಿಸಿದರು. ಆದರೆ ಆ ನಂತರ ರೋಹಿತ್ ಮತ್ತು ಸೂರ್ಯ ಜೋಡಿ ಬೇಗನೆ ಮುರಿದುಬಿತ್ತು. ರೋಹಿತ್ 57 ರನ್ ಬಾರಿಸಿ ಇನ್ನಿಂಗ್ಸ್ ಮುಗಿಸಿದರೆ, ಸೂರ್ಯಕುಮಾರ್ 47 ರನ್‌ಗಳ ಕಾಣಿಕೆ ನೀಡಿದರು. ನಂತರ ರವೀಂದ್ರ ಜಡೇಜಾ ಔಟಾಗದೆ 17 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 23 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಅಕ್ಷರ್ ಪಟೇಲ್ 10 ರನ್ ಬಾರಿಸಿದರೆ, ಅರ್ಷದೀಪ್ ಸಿಂಗ್ ಅಜೇಯ 1 ರನ್‌ಗಳ ಕಾಣಿಕೆ ನೀಡಿದರು. ಇಂಗ್ಲೆಂಡ್ ಪರ ಬೌಲ್ ಮಾಡಿದ 6 ಬೌಲರ್ಗಳ ಪೈಕಿ ನಾಲ್ವರು ತಲಾ 1 ವಿಕೆಟ್ ಪಡೆದರೆ, ಕ್ರಿಸ್ ಜೋರ್ಡಾನ್ ಅತಿ ಹೆಚ್ಚು 3 ವಿಕೆಟ್ ಪಡೆದರು.