- Advertisement -
- Advertisement -
ಕಾರ್ಕಳ: ಬೈಕ್ ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವ ವಿವಾಹಿತೆ ಸಾವನ್ನಪ್ಪಿದ ಘಟನೆ ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ನಡೆದಿದೆ.
ಮೃತಪಟ್ಟ ಯುವತಿ ಈದು ಗ್ರಾಮದ ಕರೆಂಬಾಲುವಿನ ವಿಶಾಲ್ ಅವರ ಪತ್ನಿ ನೀಕ್ಷಾ (26) ಎಂದು ಗುರುತಿಸಲಾಗಿದೆ.
ನೀಕ್ಷಾ ಜೂ. 28ರ ಸಂಜೆ ಪತಿ ವಿಶಾಲ್ ಅವರೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ನಾಯಿ ದಿಢೀರೆಂದು ಅಡ್ಡ ಬಂದಿದ್ದು, ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ನೀಕ್ಷಾ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ನೀಕ್ಷಾ ಅವರಿಗೆ ಎರಡು ತಿಂಗಳ ಹಿಂದೆಯಷ್ಟೇ ಮದುವೆ ಆಗಿತ್ತು. ದುರಂತ ಅಂದರೆ 9 ತಿಂಗಳ ಹಿಂದೆ ನಿಕ್ಷಾ ತಮ್ಮ ತಂದೆ ಪ್ರೀತಿ ಟೈಮ್ಸ್ ಸೆಂಟರ್ ಮಾಲೀಕ ಪ್ರಕಾಶ್ ಅವರನ್ನು ಕಳೆದುಕೊಂಡಿದ್ದರು.
- Advertisement -