Saturday, August 15, 2026
spot_imgspot_img
spot_imgspot_img

ಉಡುಪಿ: ಆನ್‌ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

- Advertisement -
- Advertisement -

ಉಡುಪಿ: ವ್ಯಕ್ತಿಯೋರ್ವರಿಗೆ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿನ್ನಿಮುಲ್ಕಿಯ ಎಫ್.ಇ.ಎ. ರೋಡ್ರಿಗಸ್(69) ಎಂಬವರಿಗೆ ಅಪರಿಚಿತರು ಸಂದೇಶ ಕಳುಹಿಸಿ ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದು, ಹೆಚ್ಚಿನ ಲಾಭಾಂಶದ ಆಸೆಯನ್ನು ತೋರಿಸಿದ್ದರು. ಅದನ್ನು ನಂಬಿದ ರೋಡ್ರಿಗಸ್, ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 67,16,000ರೂ. ಹಣವನ್ನು ಆನ್‌ಲೈನ್ ಮೂಲಕ ಡಿಪಾಸಿಟ್ ಮಾಡಿಸಿಕೊಂಡಿದ್ದರು. ತದನಂತರ ಆರೋಪಿಗಳು ರೋಡ್ರಿಗಸ್ ಹೂಡಿಕೆ ಮಾಡಿದ ಹಣ ಹಾಗೂ ಲಾಭಾಂಶವನ್ನು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.

- Advertisement -

Related news

error: Content is protected !!