- Advertisement -
- Advertisement -



ತಮಿಳುನಾಡು: ಪಟಾಕಿ ತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದನಗರ ಸತ್ತೂರಿನಲ್ಲಿ ನಡೆದಿದೆ.
ಖಾಸಗಿ ಒಡೆತನದ ಪಟಾಕಿ ಫ್ಯಾಕ್ಟರಿಯಲ್ಲಿ ಒಂದಕ್ಕಿಂತ ಹೆಚ್ಚು ರಸಾಯನಿಕಗಳನ್ನು ಬೆರೆಸಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ವಿರುದನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪಟಾಕಿ ಸ್ಫೋಟಗೊಂಡಂತೆ ಬೆಂಕಿ ವ್ಯಾಪಿಸಿದೆ. ಘಟನೆಯಿಂದಾಗಿ ಕಾರ್ಖಾನೆಯ ಒಂದು ಭಾಗದ ಕಟ್ಟಡ ನೆಲಸಮವಾಗಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯುಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟಕ್ಕೆ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ.
- Advertisement -