Sunday, June 29, 2025
spot_imgspot_img
spot_imgspot_img

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಲಕ್ಷಾಂತರ ರೂ. ಹಣ ವರ್ಗಾವಣೆ..!

- Advertisement -
- Advertisement -

ಮಣಿಪಾಲ: ವ್ಯಕ್ತಿಯೋರ್ವರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ.

ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್‌ ಅವರ ಬ್ಯಾಂಕ್ ಖಾತೆಯಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು 2,08,004ರೂ. ವರ್ಗಾವಣೆಗೊಂಡಿದೆ. ಸುಮಾರು 177 ಬಾರಿ ಬೇರೆ ಬೇರೆ ಕಂತುಗಳಲ್ಲಿ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಸಂಬಂಧ ಪಟ್ಟ ಬ್ಯಾಂಕ್‌ಗೆ ಹೋಗಿ ಅಧಿಕಾರಿಗಳನ್ನು ವಿಚಾರಿಸಿದಾಗ ಒಟಿಪಿ-ಡೆಬಿಟ್‌ ಕಾರ್ಡ್‌ ಮೂಲಕ ಹಣ ವರ್ಗಾ ವಣೆಯಾಗಿದೆ ಎಂದಿದ್ದಾರೆ. ಬಳಿಕ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಅವರು, ನನಗೆ ಹಣ ವರ್ಗಾವಣೆಗೆ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಸಂದೇಶಗಳು ಬಂದಿಲ್ಲ. ಯಾರೋ ಅಪರಿಚಿತ ವ್ಯಕ್ತಿ ನನ್ನ ಗಮನಕ್ಕೆ ಬಾರದಂತೆ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

- Advertisement -

Related news

error: Content is protected !!