Saturday, June 28, 2025
spot_imgspot_img
spot_imgspot_img

ಮಂಗಳೂರು: ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳವು

- Advertisement -
- Advertisement -

ಮಂಗಳೂರು : ಮನೆಯೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳುವಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕುಂಜೆ ನೀರಳಿಕೆ ಎಂಬಲ್ಲಿ ನಡೆದಿದೆ.

ಶೇಕಬ್ಬ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಶೇಕಬ್ಬ ತನ್ನ ಅಳಿಯನೊಂದಿಗೆ ಮೊಬೈಲ್ ನಲ್ಲಿ ಮಾತನಾಡಿದ್ದಾರೆ. ಈ ವೇಳೆಗೆ ಕಳ್ಳತನ ನಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಮುಂಜಾನೆ 4:30ರ ಸುಮಾರಿಗೆ ಶೇಕಬ್ಬ ಅವರ ಮಗಳು ಬಾತ್‌ರೂಮ್‌ಗೆ ಹೋಗಲು ಎಚ್ಚರವಾದ ವೇಳೆಗೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕುಟುಂಬದ ಸದಸ್ಯರು ಮನೆಯ ಮುಂಭಾಗದಲ್ಲಿ ಮಲಗಿದ್ದರು. ಕಳ್ಳರು ಮುಂಭಾಗದ ಬಾಗಿಲಿಗೆ ಹೊರಗಿನಿಂದ ಬೀಗ ಹಾಕಿದ್ದು, ಹಿಂದಿನ ಬಾಗಿಲನ್ನು ರಾಡ್ ಬಳಸಿ ತೆರೆದಿದ್ದಾರೆ. ಬಳಿಕ ಮನೆಗೆ ನುಗ್ಗಿದ ಕಳ್ಳರು ಸುಮಾರು 2 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದು ದೋಚಿದ್ದಾರೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನ ದಳ, ಮುಲ್ಕಿ ಪೊಲೀಸ್ ನಿರೀಕ್ಷಕ ವಿದ್ಯಾಧರ್ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ

- Advertisement -

Related news

error: Content is protected !!