- Advertisement -
- Advertisement -



ವಿಟ್ಲ :ದ್ವಿ ಚಕ್ರ ವಾಹನ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಿಲಪದವು ಸಮೀಪದ ಮಚ್ಚ ಎಂಬಲ್ಲಿ ನಡೆದಿದೆ.
ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಗಾಯಳುವನ್ನು ಮಂಗಿಲಪದವು ಪೊನ್ನೆತ್ತಡಿ ನಿವಾಸಿ ಶೋಭಿತ್ ಎಂದು ಗುರುತಿಸಲಾಗಿದೆ.
ಮಚ್ಚ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನ ಹಾಗೂ ವಿಟ್ಲ ಕಡೆಯಿಂದ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
- Advertisement -