- Advertisement -
- Advertisement -



ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ವಿಶ್ವನಾಥ ಅಲಿಯಾಸ್ ವೇಣು(32) ಎಂದು ಗುರುತಿಸಲಾಗಿದೆ.
ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ ವಿಶ್ವನಾಥ್ ಮನೆಯೊಳಗಿನ ಮರದ ಅಡ್ಡಕ್ಕೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿದ್ದಾರೆ ಎಂದು ಮೃತರ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
- Advertisement -