Saturday, June 28, 2025
spot_imgspot_img
spot_imgspot_img

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ; ಆರೋಪಿ ಅರೆಸ್ಟ್‌..!

- Advertisement -
- Advertisement -

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಸಫ್ಘಾನ್ (32) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಉಳ್ಳಾಲಬೈಲು ಪರಿಸರದಲ್ಲಿ ಬೈಕನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 90000 ಮೌಲ್ಯದ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ ಹಾಗೂ ಬೈಕ್ ಸೇರಿ ಸುಮಾರು ಎರಡು ಲಕ್ಷದ ಐದು ಸಾವಿರದ ಐನೂರು ಮೊತ್ತದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೋಲಿಸ್ ನಿರೀಕ್ಷಕರಾದ ಶ್ಯಾಂ ಸುಂದರ್ ಹೆಚ್ ಎಂ, ಪಿಎಸ್ಸಿಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

- Advertisement -

Related news

error: Content is protected !!