Sunday, June 28, 2026
spot_imgspot_img
spot_imgspot_img

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಬೈಕ್‌ ಸವಾರ ಸಾವು..!

- Advertisement -
- Advertisement -

ಮಂಡ್ಯ: ಬೈಕ್​ನಲ್ಲಿ ವೇಗವಾಗಿ ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಮಂಡ್ಯದ ಮದ್ದೂರು ಪಟ್ಟಣದಲ್ಲಿ ನಡೆದಿದೆ.

ಮೃಪಟ್ಟ ವ್ಯಕ್ತಿ ಬೆಸಗರಹಳ್ಳಿ ಗ್ರಾಮದ ಬಿ.ಎ ಮಧು ಕುಮಾರ್ (34) ಎಂದು ಗುರುತಿಸಲಾಗಿದೆ.

ಇವರು ಕೆಲಸ ಮುಗಿಸಿಕೊಂಡು ರಾತ್ರಿ 9 ಗಂಟೆಗೆ ತಮ್ಮ ಊರಿಗೆ ಹೋಗುತ್ತಿದ್ದರು. ಈ ವೇಳೆ ಮದ್ದೂರು ಪಟ್ಟಣದ ಟಿಬಿ ವೃತ್ತದ ಬಳಿ ಲಾರಿಯೊಂದು ನಿಂತಿತ್ತು. ಹಿಂಬದಿಯಿಂದ ವೇಗವಾಗಿ ಬಂದು ಬೈಕ್​​ನಿಂದ ಲಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದಿದ್ದ. ಡಿಕ್ಕಿಯಾದ ರಭಸಕ್ಕೆ ತಲೆಗೆ ಗಂಭೀರವಾದ ಪೆಟ್ಟು ಬಿದ್ದು ರಕ್ತ ಸ್ರಾವ ಆಗುತ್ತಿತ್ತು.

ತಕ್ಷಣ ಆತನನ್ನು ಮದ್ದೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮದ್ದೂರು ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

- Advertisement -

Related news

error: Content is protected !!