Saturday, June 28, 2025
spot_imgspot_img
spot_imgspot_img

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್..!

- Advertisement -
- Advertisement -

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಟೋರಿಯಸ್ ಮಹಮ್ಮದ್ ಅಶ್ಪಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

ನಟೋರಿಯಸ್ ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಇವನ ಮೇಲೆ 8 ಕ್ರಿಮಿನಲ್ ಕೇಸು ಇದೆ. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿರುವ ಬಗ್ಗೆ ಹುಡುಗಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ಕೊಟ್ಟಿದ್ದಾರೆ.

ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನ ಪ್ರಜ್ಞಾ ಸಲಹಾ ಕೇಂದ್ರ ಮುಡಿಪು ಇಲ್ಲಿ ಇರಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

- Advertisement -

Related news

error: Content is protected !!