- Advertisement -
- Advertisement -




ಹಾಸನ: ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬದಲಿ ರಸ್ತೆಯ ಮೂಲಕ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ ಮಧ್ಯಾಹ್ನದಿಂದಲೇ ಗುಡ್ಡ ಕುಸಿಯಲು ಆರಂಭಿಸಿತ್ತು. ವಾಹನಗಳು ಸಂಚರಿಸುವಾಗ ಗುಡ್ಡ ಕುಸಿದಿದೆ. ಕೂದಲೆಳೆ ಅಂತರದಲ್ಲಿ ವಾಹನ ಸವಾರರು ಪಾರಾಗಿದ್ದಾರೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಸ್ತೆ ಪಕ್ಕದ ಗುಡ್ಡಗಳು ಕುಸಿಯುತ್ತಿವೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ.
- Advertisement -