Sunday, June 29, 2025
spot_imgspot_img
spot_imgspot_img

ಮಾಣಿ: ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ; ವಾಹನ ಸವಾರರಿಗೆ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಕೆ..!

- Advertisement -
- Advertisement -

ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.

- Advertisement -

Related news

error: Content is protected !!