Thursday, June 18, 2026
spot_imgspot_img
spot_imgspot_img

ಉಪ್ಪಿನಂಗಡಿ: 2 ಬೈಕ್‌ಗಳ ನಡುವೆ ಅಪಘಾತ ; ಓರ್ವ ಸಾವು; ನಾಲ್ವರಿಗೆ ಗಾಯ

- Advertisement -
- Advertisement -

ಉಪ್ಪಿನಂಗಡಿ: ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಉಪ್ಪಿನಂಗಡಿಯ ತುರ್ಕಳಿಕೆ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಬೈಕ್ ಸವಾರ ಶಿವಾನಂದ ಮೃತ ದುರ್ದೈವಿ.

ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಮತ್ತು ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿವಾಗ ಎದುರುಗಡೆಯಿಂದ ಕರೀಂ ಎಂಬುವವರು ಬೈಕ್ ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗಿವೆ.

ಢಿಕ್ಕಿಯ ರಭಸಕ್ಕೆ ಶಿವಾನಂದ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಧನಂಜಯ, ರವಿ, ಅಸ್ಮಾನ್ ಹಾಗೂ ಕರೀಂ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ

- Advertisement -

Related news

error: Content is protected !!