- Advertisement -
- Advertisement -



ಕೇರಳದಲ್ಲಿ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿತ್ತು. ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ
ತಿರುವನಂತಪುರಂ(ಜು.21) ಕೇರಳದ 14ರ ಬಾಲಕನಲ್ಲಿ ಮಾರಣಾಂತಿಕ ನಿಫಾ ವೈರಸ್ ಖಚಿತಗೊಂಡ ಮರುದಿನವೇ ಆತಂಕ ಹೆಚ್ಚಾಗಿದೆ. ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸಾವನ್ನಪ್ಪಿದ್ದಾನೆ. ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ದೃಡಪಟ್ಟಿತ್ತು. ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನೆರವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ಬಾಲಕನನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲಾಗಿತ್ತು. ಆದರೆ ಇಂದು ಬಾಲಕ ಮೃತಪಟ್ಟಿದ್ದಾನೆ. ಇದರ ಬೆನ್ನಲ್ಲೇ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ನಿಫಾ ವೈರಸ್ನಿಂದ ಈ ಬಾಲಕ ಮೃತಪಟ್ಟಿದ್ದಾನೋ ಅಥವಾ ಇತರ ಕಾರಣಗಳಿಂದ ಮೃತಪಟ್ಟಿದ್ದಾನೋ ಅನ್ನೋದು ಶೀಘ್ರದಲ್ಲ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಲಿದೆ..
- Advertisement -