Thursday, June 4, 2026
spot_imgspot_img
spot_imgspot_img

ಬೆಳ್ತಂಗಡಿ: ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಮನೆಯ ಬಾವಿಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮಹಿಳೆಯೊಬ್ಬರು ಮರತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.

ಮಹಿಳೆ ಬಾವಿಗೆ ಬಿದ್ದಿರುವುದನ್ನು ಅವರ ಗಂಡ ಗಮನಿಸಿದ್ದು ತಕ್ಷಣ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಕೂಡಲೇ ಅವರನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಆವೇಳೆಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!