Saturday, June 28, 2025
spot_imgspot_img
spot_imgspot_img

ಮಣಿಪಾಲ: ಬೈಕ್ ಕಳವು ಪ್ರಕರಣ; ಆರೋಪಿ ಅರೆಸ್ಟ್‌‌..!

- Advertisement -
- Advertisement -

ಮಣಿಪಾಲ: ಕಳೆದ ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಮಣ್ಣಪಳ್ಳ ಎಂಜೆಸಿ ಕಾಲೇಜು ಬಳಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬ್ರಹ್ಮಾವರ ಪುತ್ತೂರು ನಿವಾಸಿ ಪ್ರಕಾಶ್ ನಾಯಕ್ ಎಂದು ಗುರುತಿಸಲಾಗಿದೆ.

ಈತನಿಂದ ಕಳವು ಮಾಡಿರುವ ಬೈಕ್‌ನ್ನು ವಶಪಡಿಸಿ ಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಲಾಗಿದೆ.

ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವಾಗ ಬೈಕಿನಲ್ಲಿ ಬಂದ ವ್ಯಕ್ತಿಯ ನಡುವಳಿಕೆಯ ಮೇಲೆ ಸಂಶಯಗೊಂಡು ತಡೆದು ನಿಲ್ಲಿಸಿದರು. ಬಳಿಕ ವಿಚಾರಣೆ ನಡೆಸಿದಾಗ ಆತನ ಕೈಯಲ್ಲಿದ್ದ ಬೈಕ್ ಕಳವು ಮಾಡಿರುವುದು ತಿಳಿದು ಬಂದಿದ್ದು, ಕೂಡಲೇ ಆತನನ್ನು ವಶಕ್ಕೆ ಪಡೆದು ಬೈಕ್‌ನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ದೇವರಾಜ್‌ ಟಿ.ವಿ., ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ, ಸಿಬ್ಬಂದಿಗಳಾದ ಇಮ್ರಾನ್, ಪ್ರಸನ್ನ ಕಾರ್ಯಾಚರಣೆಯಲ್ಲಿದ್ದರು.

- Advertisement -

Related news

error: Content is protected !!