- Advertisement -
- Advertisement -


ಕಡಬ: ಕಡಬ ತಾಲೂಕಿನ ಕೋಡಿಂಬಾಳದಲ್ಲಿ ರಸ್ತೆದಾಟಲು ನಿಂತಿದ್ದ ವೃದ್ಧರೊಬ್ಬರಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಕೋಡಿಂಬಾಳದ ಹುಕ್ರ (75) ಮೃತ ವ್ಯಕ್ತಿ
ಕೋಡಿಂಬಾಳ ಗ್ರಾಮದ ಶಾಮಿಯಾನ ಅಂಗಡಿಯೊಂದರ ಬಳಿ ಮುಹಮ್ಮದ್ ನೌಫಾಲ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಕೋಡಿಂಬಾಳದ ಹುಕ್ರ ಎಂಬವರಿಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಹುಕ್ರ ಅವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲಿದ್ದವರು ಕಡಬ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಿದ್ದರು.
ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -