- Advertisement -
- Advertisement -




ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 48 ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಮಾಹಿತಿ ವರದಿಯಾಗಿದೆ.
ಶಿವಗಢ-ಅಸ್ಸಾರ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಶಂಕೆ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.
ಉಗ್ರರ ಬಳಿ ಕಾರ್ಬೈನ್ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರ ಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.
- Advertisement -








