- Advertisement -
- Advertisement -


ಭಾರತೀಯ ಕೋಸ್ಟ್ ಗಾರ್ಡ್ (ICG) ಮಹಾನಿರ್ದೇಶಕ ರಾಕೇಶ್ ಪಾಲ್ ಅವರು ಹೃದಯಾಘಾತದಿಂದ ಭಾನುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್ ಪಾಲ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಕೇಶ್ ಪಾಲ್ ಶನಿವಾರ ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದರು. ತಕ್ಷಣ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೋಸ್ಟ್ ಗಾರ್ಡ್ ಡಿಜಿ ಸಂಜೆ 7 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
- Advertisement -