Wednesday, August 5, 2026
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಿದ A1 ಆರೋಪಿ ಪವಿತ್ರಾಗೌಡ

- Advertisement -
- Advertisement -

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಸೋಮವಾರ (ಆ.19) ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್‌ 22ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ ಜೈಲು ಸೇರಿ 72 ದಿನಗಳು ಕಳೆದಿವೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಚಾರ್ಜ್‌ ಶೀಟ್‌ ಸಲ್ಲಿಸಲು ಮುಂದಾಗಿದ್ದಾರೆ.

ಈ ಹೊತ್ತಿನಲ್ಲಿ ಪವಿತ್ರಾಗೌಡ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿರುವುದು ಕೂತೂಹಲಕ್ಕೆ ಕಾರಣವಾಗಿದೆ. ಕಳೆದ ಜೂನ್‌ 11ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ.

- Advertisement -

Related news

error: Content is protected !!